ಮಂಗಳೂರು, ಜೂ.14: ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವವು ಜೂ.15ರಂದು ನಡೆಯಲಿದ್ದು, ಈ ಸಂದರ್ಭ ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಡಾ.ರೊನಾಲ್ಡ್ ಕೊಲಾಸೊ, ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ| ತುಂಬೆ ಮೊಯ್ದಿನ್ ಹಾಗೂ ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು ಎಂದು ವಿವಿಯ ಕುಲಪತಿ ಪ್ರೊ| ಪಿ.ಎಲ್.ಧರ್ಮ ತಿಳಿಸಿದ್ದಾರೆ.

ಘಟಿಕೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ 155 ಮಂದಿಗೆ ಪಿ.ಎಚ್.ಡಿ. ಡಾಕ್ಟರೇಟ್ ಪದವಿ (ಕಲೆ -51, ವಿಜ್ಞಾನ -73, ವಾಣಿಜ್ಯ 26, ಶಿಕ್ಷಣ -05) ಇವರಲ್ಲಿ 60 ಮಹಿಳೆಯರು ಮತ್ತು 95 ಪುರುಷರು. ಈ ಬಾರಿ 18 ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಹಾಗೂ 4 ಅಂತಾರಾಷ್ಟ್ರೀಯ ಮಹಿಳಾ ವಿದ್ಯಾರ್ಥಿಗಳು ಪಿ.ಎಚ್.ಡಿ ಪದವಿ ಪಡೆಯಲಿರುವರು.