ನಿಟ್ಟೆ: "ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರ ಆಳ್ವಿಕಯು ನಮ್ಮ ದೇಶವನ್ನು ಹಿಂದುಳಿದ ದೇಶವನ್ನಾಗಿಸಿತು. 1947 ರಿಂದ ತೊಡಗಿ ಇಂದಿನವರೆಗೆ 78 ವರ್ಷಗಳಲ್ಲಿ ದೇಶವು ಅಭಿವೃದ್ದಿ ಹೊಂದಿರುವ ಪ್ರಮಾಣವು ಗಮನಾರ್ಹ. ನಮ್ಮ ಇಂದಿನ ಉತ್ತಮ ಬದುಕಿಗೆ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವೇ ಕಾರಣವೆಂಬುದನ್ನು ನಾವು ಎಂದಿಗೂ ಮರೆಯಬಾರದು. ಜಾಗತಿಕ ಮಟ್ಟದಲ್ಲಿ ಭಾರತವನ್ನು ಬಲಿಷ್ಟ ದೇಶವನ್ನಾಗಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕೈಜೋಡಿಸೋಣ" ಎಂದು ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಪ್ರಶಾಂತ್ ಕುಮಾರ್ ಅಭಿಪ್ರಾಯಪಟ್ಟರು.
ಅವರು ಆಗಸ್ಟ್.15 ರಂದು ನಿಟ್ಟೆ ಕ್ಯಾಂಪಸ್‌ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನಿಟ್ಟೆ ತಾಂತ್ರಿಕ ಕಾಲೇಜಿನ 6 ಕೆ.ಎ.ಆರ್ ನೇವಲ್ ಎನ್.ಸಿ.ಸಿ ಘಟಕದ ವಿದ್ಯಾರ್ಥಿಗಳು ಹಾಗೂ ಡಾ. ಎನ್.ಎಸ್.ಎ.ಎಂ ಶಾಲೆಯ ಎನ್.ಸಿ.ಸಿ ಕೆಡೆಟ್ ಗಳು ಆಕರ್ಷಕ ಪಥಸಂಚಲನ ನಡೆಸಿದರು. ಕಾಲೇಜಿನ ಸುರಕ್ಷತಾ ಸಿಬ್ಬಂದಿವರ್ಗ, ಪ್ರಾಧ್ಯಾಪಕರು, ಬೊಧಕೇತರ ವರ್ಗ, ವಿದ್ಯಾರ್ಥಿಗಳು, ಭಾಗವಹಿಸಿದ್ದರು. ಡಾ.ಎನ್.ಎಸ್.ಎ.ಎಂ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿಗೀತೆ ಗಾಯನ ನಡೆಯಿತು.
ವೇದಿಕೆಯಲ್ಲಿ ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು, ನಿರ್ದೇಶಕರು, ಉಪಪ್ರಾಂಶುಪಾಲರು, ವಿವಿಧ ವಿಭಾಗ ಮುಖ್ಯಸ್ಥರು ಉಪಸ್ಥಿತರಿದ್ದರು.
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ನಿರಂಜನ್ ಎನ್ ಚಿಪ್ಳೂಣ್ಕರ್ ಸ್ವಾಗತಿಸಿದರು. ರಸಾಯನ ಶಾಸ್ತ್ರ ವಿಭಾಗದ ಡಾ| ಶ್ರೇಯಾ ಕಾಂತ್ ವಂದಿಸಿದರು. ನಿಟ್ಟೆ ತಾಂತ್ರಿಕ ಕಾಲೇಜಿನ ಎನ್.ಸಿ.ಸಿ ಘಟಕದ ಉಸ್ತುವಾರಿ ಅಧಿಕಾರಿ ಸಬ್ ಲೆಫ್ಟಿನೆಂಟ್ ಡಾ| ಶಿವಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.