ಕಾರ್ಕಳ:  ಜಿಲ್ಲಾ ಪಂಚಾಯತ್ ಉಡುಪಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಇವರ ಸಹಯೋಗದಲ್ಲಿ ಸರಕಾರಿ ಪ್ರೌಢಶಾಲೆ ಕಾವಡಿ ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ ಉಡುಪಿ ಜಿಲ್ಲಾಮಟ್ಟದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‍ಕಿಂಗ್ ಆಂಗ್ಲಮಾಧ್ಯಮ ಪೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ. 

ಒಂಬತ್ತನೇ ತರಗತಿಯ ಶಗುನ್ ವರ್ಮಾ, ಶೈನಿ ಡಿಸೋಜಾ, ಕಾರ್ತಿಕಾ ಶೆಟ್ಟಿ, ಆಶಿಕಾ, ಹತ್ತನೇ ತರಗತಿಯ ವಿದ್ಯಾಶ್ರೀ, ಕೀರ್ತನಾ ಡಿಸೋಜ, ಎಂಟನೇ ತರಗತಿಯ ಸಾನ್ವಿ ಶೆಟ್ಟಿ ತಂಡವನ್ನು ಪ್ರತಿನಿಧಿಸಿದ್ದು ಇದರಲ್ಲಿ ಒಂಬತ್ತನೇ ತರಗತಿಯ ಶೈನಿ ಡಿಸೋಜಾ, ಶಗುನ್ ವರ್ಮಾ ಮತ್ತು ಕಾರ್ತಿಕಾ ಶೆಟ್ಟಿ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಪಂದ್ಯಾಟದಲ್ಲಿ ಶಗುನ್ ವರ್ಮಾ ಬೆಸ್ಟ್ ಅಟ್ಯಾಕರ್ ಮತ್ತು ಶೈನಿ ಡಿಸೋಜ ಬೆಸ್ಟ್ ಪಾಸರ್ ಪ್ರಶಸ್ತಿ ಪಡೆದುಕೊಂಡರು. ಇದರ ಜೊತೆಗೆ ಪ್ರಾಥಮಿಕ ವಿಭಾಗದ ಬಾಲಕಿಯರ ಕಾರ್ಕಳ ತಾಲೂಕು ತಂಡವು ಜಿಲ್ಲಾಮಟ್ಟದಲ್ಲಿ ಫ್ರಥಮ ಸ್ಥಾನ ಪಡೆದುಕೊಂಡಿದ್ದು ತಂಡ ಪ್ರತಿನಿಧಿಸಿದ್ದ ಸಂಸ್ಥೆಯ ವಿದ್ಯಾರ್ಥಿನಿಯರಾದ ಆರನೇ ತರಗತಿಯ ತ್ರಿಷ್ಮಾ ಎಸ್, ಕೆಟ್ಲಿನ್ ಏಂಜೆಲ್ ಪಿಂಟೊ, ಎಲ್ಸಾ ರುಬೆಲ್ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತ್ರಿಷ್ಮಾ.ಎಸ್ ಪಂದ್ಯಾಟದ ಬೆಸ್ಟ್ ಅಟ್ಯಾಕರ್ ಪ್ರಶಸ್ತಿ ಪಡೆದುಕೊಂಡರು.