ಕಾರ್ಕಳ: ವಿಶ್ವ ಹೃದಯ ದಿನಾಚರಣೆಯ ಪ್ರಯುಕ್ತ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಮತ್ತು ರೋಟರಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳ ಹಾಗೂ ಡಾ. ಟಿ. ಎಂ. ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ವಾಕಥಾನ್ ಹೃದಯ ದಿನಾಚರಣೆಯ ಅವಾರ್ಡ್ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

ಗರಿಷ್ಠ ವಿದ್ಯಾರ್ಥಿಗಳ ಭಾಗವಹಿಸುವಿಕೆಯಲ್ಲಿ ಪ್ರಥಮ ಸ್ಥಾನ, ಅತ್ಯಂತ ಶಿಸ್ತಿನ ತಂಡಕ್ಕೆ ಪ್ರಥಮ ಸ್ಥಾನ, ಘೋಷಣೆ ಕೂಗುವಿಕೆಯಲ್ಲಿ ಪ್ರಥಮ, ಸ್ಕಿಟ್ ಸ್ಪರ್ಧೆಯಲ್ಲಿ ದ್ವಿತೀಯ, ಫ್ಲಕಾರ್ಡ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಬೋಧಕ-ಬೋಧಕೇತರ ವರ್ಗದವರು ಪ್ರಶಂಸಿಸಿದ್ದಾರೆ.