ಕಾರ್ಕಳ: ಜಿಲ್ಲಾ ಮಲೆಕುಡಿಯ ಸಂಘ (ರಿ.), ಉಡುಪಿ ಇದರ 2025 -28ರ ಆಡಳಿತ ಮಂಡಳಿ ವಾರ್ಷಿಕ ಮಹಾಸಭೆಯು ಇತೀಚೆಗೆ ಸಂಘದ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಪುನಾರಚನೆ ಪುನರಚನೆ ನಡೆಯಿತು ಜಿಲ್ಲಾಧ್ಯಕ್ಷರಾಗಿ ಗಂಗಾಧರ ಗೌಡ ಪುನಾರಾಯ್ಕೆಯಾಗಿದ್ದಾರೆ. ಉಪಾದ್ಯಕ್ಷೆಯಾಗಿ ಶಾರದಾ ಪೇರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ ಕೆರ್ವಾಶೆ, ಸಹ ಕಾರ್ಯದರ್ಶಿಯಾಗಿ ಚಾಂದಿನಿ ಶಿರ್ಲಾಲು, ಕೋಶಾಧಿಕಾರಿಯಾಗಿ ಸುಂದರಿ ಪೇರಡ್ಕ, ಸಂಘಟನಾ ಕಾರ್ಯದರ್ಶಿಯಾಗಿ ಅಜಿತ್ ಅಂಡಾರು, ಸಹ ಸಂಘಟನಾ ಕಾರ್ಯದರ್ಶಿಯಾಗಿ ಶಶಿಧರ ಕಬ್ಬಿನಾಲೆ, ವಕ್ತಾರರಾಗಿ ದಿನೇಶ್ ಗೌಡ ನೂರಾಳ್ ಬೆಟ್ಟು, ಸಹ ವಕ್ತಾರೆಯಾಗಿ ಸುಜಾತ ಕಬ್ಬಿನಾಲೆ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.