ಕಾರ್ಕಳ,ಮೇ 30: ಅಪ್ರಾಪ್ತ ದಲಿತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಲ್ಯಾ ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯ ಸಂತೋಷ್ ಪುತ್ರನ್ ನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಪೋಕ್ಸೋ ಮತ್ತು ದಲಿತರ ಮೇಲಿನ ದೌರ್ಜನ್ಯ ಕಾಯ್ದೆಯಡಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೇ 28 ಮಂಗಳವಾರ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ಮೇ 29 ರಂದು ಬುಧವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಂತೋಷ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.