ಕಿನ್ನಿಗೋಳಿ: ಗ್ರಾಮದ ಜನತೆಯ ಸಮಸ್ಯೆಗಳನ್ನು ಒಂದೇ ಸೂರಿನಡಿ ಪರಿಹರಿಸುವ ಉದ್ದೇಶದಿಂದ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೊಟ್ಯಾನ್ ಅವರು ಹೇಳಿದರು.
ಅವರು ಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಯಾಟಿಸಿ ಮಾತನಾಡಿ, ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಮೂಲ್ಕಿ ಮೂಡಬಿದ್ರೆಗೆ ಸಾವಿರದ ಎಂಟುನೂರ ಇಪ್ಪತೈದು ಕೋಟಿ ಮೂವತ್ತ ಆರು ಲಕ್ಷ ಅನುದಾನವನ್ನು ತರಲಾಗಿದ್ದು, ಸುಮಾರು ಆರು ಸಾವಿರಕ್ಕಿಂತಲೂ ಹೆಚ್ಚು ಕುಟುಂಬಗಳಿಗೆ ಹಕ್ಕು ಪತ್ರ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನೂ ಮೂರು ಸಾವಿರದಷ್ಟು ಹಕ್ಕು ಪತ್ರ ವಿತರಣೆ ಆಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಭತ್ತದ ಬೆಳೆ ಸ್ಪರ್ಧೆಯಲ್ಲಿ ವಿಜೇತರಾದ ಕರುಣಾಕರ ಶೆಟ್ಟಿ ಉಳೆಹಾಡಿರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಪಿಂಚಣಿ ಪ್ರಮಾಣ ಪತ್ರ, ಬೆಳಕು ಯೋಜನೆಯ ಆದೇಶ ಪತ್ರ, ದಿಕಲ ಚೇತನರಿಗೆ ಭತ್ತೆ ಪೋಷಣಾ ಪ್ರಮಾಣ ಪತ್ರ, ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ, ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ವಿತರಣೆ ನಡೆಯಿತು. ಸುಮಾರು 50 ಕ್ಕೂ ಹೆಚ್ಚು ಅರ್ಜಿಗಳನ್ನು ವಿಲೇವಾರಿ ಮಾಡಲಾಯಿತು.
ಮುಲ್ಕಿ ತಹಶೀಲ್ದಾರ್ ಅನಂತ ಶಂಕರ್, ಕಾರ್ಯನಿರ್ವಹಣಾಧಿಕಾರಿ ದಯಾವತಿ, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸಾಯಿಶ್ ಚೌಟ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.