ಉಡುಪಿ, ಏ 04: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂದಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಪ್ರೊಟೆಸ್ಟ್ ಸರ್ವ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಎಂ.ಕೆ ದಯಾನಂದ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಸಚಿನ್ ಬಿ.ಕೆ, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಆರ್ ಕುಸುಮ, ರಾಜ್ ಬಲ್ಲಾಳ್ ಹಾಗೂ ಹೆಚ್ ಸುರೇಶ್ ಪೂಜಾರಿ, ನಾಮಪತ್ರ ಸಲ್ಲಿಸಿದರು.
ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ.