ಮಂಗಳೂರು: ಅಬಕಾರಿ ವಸ್ತುಗಳ ಅಕ್ರಮ ಸಾಗಾಣಿಕೆಗೆ ಬಳಸಲಾದ ವಾಹನಗಳನ್ನು ಬಹಿರಂಗ ಹರಾಜಿನಲ್ಲಿ ವಿಲೇವಾರಿ ಮಾಡಲು ಅಬಕಾರಿ ಇಲಾಖೆ ತಿಳಿಸಿದೆ.
ಆಗಸ್ಟ್ 6ರಂದು ಬೆಳಿಗ್ಗೆ 11.30 ಗಂಡೆಗೆ ಬಂಟ್ವಾಳ ಅಬಕಾರಿ ಡಿವೈಎಸ್‍ಪಿ ಕಚೇರಿಯಲ್ಲಿ ಹಾಗೂ ಆಗಸ್ಟ್ 7 ಮತ್ತು 8ರಂದು ಬೆಳಿಗ್ಗೆ 11:30 ಗಂಟೆಗೆ ಮಂಗಳೂರಿನ ಮೇರಿಹಿಲ್ ನಲ್ಲಿರುವ ಅಬಕಾರಿ ಭವನ ಅಬಕಾರಿ ಉಪ ಆಯುಕ್ತರ ಕಚೇರಿಯಲ್ಲಿ ವಾಹನಗಳು ಇರುವ ಸ್ಥಿತಿಗತಿಯಲ್ಲಿ ಹರಾಜು ನಡೆಯಲಿದೆ ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.