ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿತ ಹಿರಿಯ ನಾಟಕಕಾರ ಮನು ಇಡ್ಯಾ ಅವರು ಬರೆದ 'ಗಂಧದ ಕೊರಡ್ ಬೊಕ್ಕ ತಾಂಗ್ ನಿರೆಲ್' ಎರಡು ನಾಟಕಗಳ ಪುಸ್ತಕ ಬಿಡುಗಡೆ ಮತ್ತು ಮನು ಇಡ್ಯಾ ಅವರಿಗೆ ಚಾವಡಿ ತಮ್ಮನ ಕಾರ್ಯಕ್ರಮ ನ.13 ರಂದು ಸಂಜೆ 4 ಗಂಟೆಗೆ ಸುರತ್ಕಲ್‍ಇಡ್ಯಾ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆಯಲಿದೆ.
ವಿಜಯ ಕರ್ನಾಟಕ ದಿನಪತ್ರಿಕೆಯ ನಿವೃತ್ತ ಸ್ಥಾನೀಯ ಸಂಪಾದಕ ಯು.ಕೆ. ಕುಮಾರನಾಥ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ವಹಿಸಲಿದ್ದು, ಹಿರಿಯ ರಂಗನಟಿ ಗೀತಾ ಸುರತ್ಕಲ್ ಚಾವಡಿ ತಮ್ಮನದ ಅಭಿನಂದನಾ ಮಾತುಗಳನ್ನಾಡಲಿದ್ದಾರೆ.
ಬಿಲ್ಲವ ಸೇವಾ ಸಮಾಜ ಸಂಘದ ಅಧ್ಯಕ್ಷೆ ಯಮುನಾ ಶೇಖರ್, ಕನ್ನಡ ಸಾಹಿತ್ಯ ಪರಿಷತ್ ಸುರತ್ಕಲ್ ಹೋಬಳಿ ಘಟಕದ ಅಧ್ಯಕ್ಷೆ ಗುಣವತಿ ರಮೇಶ್, ಸಿಂಗಾರ ಸುರತ್ಕಲ್‍ನ ಕಾರ್ಯದರ್ಶಿ ಕೃಷ್ಣಮೂರ್ತಿ, ಅಕಾಡೆಮಿ ಸದಸ್ಯ ಹಾಗೂ ರಂಗ ನಿರ್ದೇಶಕ ಉದ್ಯಾವರ ನಾಗೇಶ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.