ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಮಹಾ ಸಮರಕ್ಕೆ ಬಿಜೆಪಿ ಸರ್ವ ಸನ್ನದ್ಧವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ವಿವಿಧ ಘಟಕಗಳು, ಪ್ರಕೋಷ್ಠಗಳು, ಸಮಿತಿಗಳು ಬಿರುಸಿನ ಚಟುವಟಿಕೆ ನಡೆಸುತ್ತಿವೆ.

(ಏ.1 ಸೋಮವಾರ) ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಮಹಾನಗರ ಪಾಲಿಕೆ ಸದಸ್ಯರ ಮಹತ್ವದ ಸಂಘಟನಾತ್ಮಕ ಸಭೆ ನಡೆಯಿತು.
ಜಿಲ್ಲಾ ಚುನಾವಣಾ ಪ್ರಭಾರಿಗಳಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ಚುನಾವಣಾ ಉಸ್ತುವಾರಿಗಳಾದ ನಿತಿನ್ ಕುಮಾರ್, ಪಕ್ಷದ ಹಿರಿಯರಾದ ಮೋನಪ್ಪ ಭಂಡಾರಿ, ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ಮಾಡಿದರು.