ಮಂಗಳೂರು: ಬೆಂದೂರಿನ ಸೈಂಟ್ ತೆರೆಸಾ ಶಾಲೆಯಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಸಂಭ್ರಮದಿಂದ ಜರುಗಿತು.
ಶಾಲಾ ಮಂತ್ರಿಮಂಡಲದ ಸದಸ್ಯರು ಸುಂದರ, ಕ್ರಿಯಾತ್ಮಕ ಕಾರ್ಯಕ್ರಮವನ್ನು ನೀಡುವುದರ ಮೂಲಕ ಮಕ್ಕಳಲ್ಲಿ ಉತ್ಸಾಹ ತುಂಬಿದರು. ಶಾಲಾ ಪ್ರಾಂಶುಪಾಲರಾದ ಭಗಿನಿ ಲೂರ್ಡ್ಸ್ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುವಂತೆ ಪ್ರೇರೇಪಿಸಿದರು.
ಶಿಸ್ತು ಬಧ್ಧ - ಮೌಲ್ಯ ಧಾರಿತ ನಡವಳಿಕೆಯನ್ನು ವಿದ್ಯಾರ್ಥಿಗಳ ದಿನನಿತ್ಯದ ಜೀವನದಲ್ಲಿ ಶಾಲಾ ಆರಂಭದ ಶುಭದಿನದಿಂದಲೇ ಅಭ್ಯಾಸ ಮಾಡಿಕೊಳ್ಳಬೇಕೆಂದು ತಿಳಿಸಿ, ಎಲ್ಲರಿಗೂ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಉಪ ಪ್ರಾಂಶುಪಾಲರಾದ ಭ | ರೀನಾ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.