ಮಂಗಳೂರು ಜೂ.6: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದ ಯೋಜನೆಗಳ ವಿವರ:- 1)ಸ್ವಯಂ ಉದ್ಯೋಗ ನೇರಸಾಲ ಯೋಜನೆ, 2)ಅರಿವು-ಶೈಕ್ಷಣಿಕ ನೇರಸಾಲ ಯೋಜನೆ, 3)ಗಂಗಾ ಕಲ್ಯಾಣ ಯೋಜನೆ, ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು, 4)ಸ್ವಯಂ ಉದ್ಯೋಗ ನೇರಸಾಲ, 5) ಸ್ವಾವಲಂಬಿ ಸಾರಥಿ ಯೋಜನೆ,6) ವಿದೇಶಿ ವ್ಯಾಸಂಗ ಯೋಜನೆ- ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.15 ಲಕ್ಷಗಳ ಮಿತಿಯಲ್ಲಿರಬೇಕು.ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 2.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ:-ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಕಾಡುಗೊಲ್ಲ ಜಾತಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. 

5. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುತ್ತದೆ. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50/-ಲಕ್ಷಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು.ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000ಮತ್ತು ನಗರ ಪ್ರದೇಶದವರಿಗೆ ರೂ. 1,20,000ಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ 33%, ವಿಕಲಚೇತನರಿಗೆ 5% ಹಾಗೂ ತೃತೀಯ ಲಿಂಗಿಗಳಿಗೆ ಶೇ1% ಮೀಸಲಾತಿ ಇರಿಸಲಾಗಿದೆ.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು (ಶ್ರೀ /ಶ್ರೀಮತಿ /ಕುಮಾರಿ ಮುಂತಾದ ಮಾಹಿತಿಗಳು). ಮಂಗಳೂರು ಒನ್ ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಛೇರಿ (ದೂ.ಸಂ:7899899039) ಸಂಪರ್ಕಿಸಬಹುದು ಎಂದು  ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.