ಮಂಗಳೂರು: ಮಹಾತ್ಮಗಾಂಧಿ ಶಾಂತಿ ಪ್ರತಿಷ್ಠಾನ ವತಿಯಿಂದ ಗಾಂಧಿ ಜಯಂತಿ ಆಚರಣೆ ಮತ್ತು ಮಹಾತ್ಮಗಾಂಧಿ ಶಾಂತಿ ಪ್ರತಿಷ್ಠಾನದ 'ವರ್ಷದ ವ್ಯಕ್ತಿ ಗೌರವ 2024' ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅಕ್ಟೋಬರ್ 2 ರಂದು ಬೆಳಗ್ಗೆ 9.30ಕ್ಕೆ ನಗರದ ಟಾಗೋರ್ ಪಾರ್ಕ್ ಪ್ರತಿಷ್ಠಾನದ ಕಾರ್ಯಾಲಯದಲ್ಲಿ ನಡೆಯಲಿದೆ. ಡಾ. ಎ. ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ. ನಾಗಪ್ಪ ಗೌಡ ಆರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕ ಕೆ.ಟಿ ಆಳ್ವ ಅವರಿಗೆ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.