ಮಂಗಳೂರು ಜೂ.6:  2025-26ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ( Day & Evening Programme)/  ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು ಮಂಗಳಗಂಗೋತ್ರಿ/ವಿಶ್ವವಿದ್ಯಾನಿಲಯ ಕಾಲೇಜು, ನೆಲ್ಯಾಡಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು, ಬನ್ನಡ್ಕ, ಮೂಡಬಿದಿರೆ ಇಲ್ಲಿಯ ಪದವಿ ಕಾರ್ಯಕ್ರಮಗಳಿಗೆ (UG) ಈ ಕೆಳಕಂಡ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದ್ದು, ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕ ಹೊಂದಿರುವ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳೊಂದಿಗೆ) ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ವಿಷಯಗಳು:

ಇಂಗ್ಲೀಷ್, ಕನ್ನಡ, ಹಿಂದಿ, ಸಂಸ್ಕೃತ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಫಿಸಿಕ್ಸ್, ಕೆಮಿಸ್ಟ್ರಿ, ಮೈಕ್ರೋ ಬಯಾಲಜಿ, ಗಣಿತ, ಕಂಪ್ಯೂಟರ್ ಸೈನ್ಸ್ /ಬಿ.ಸಿ.ಎ, ಬಾಟನಿ, ಪ್ರಾಣಿ ಶಾಸ್ತ್ರ, ಸಮಾಜಶಾಸ್ತ್ರ, ಪತ್ರಿಕೋದ್ಯಮ, ಜಿಯೋಗ್ರಾಫಿ, ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್, ಬಿಬಿಎ ಟೂರಿಸಂ ಆ್ಯಂಡ್ ಟ್ರಾವೆಲ್ ಮ್ಯಾನೇಜ್ಮೆಂಟ್, ಫಿಸಿಕಲ್ ಎಜುಕೇಶನ್ / ಸ್ಪೋಟ್ರ್ಸ್.

ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್‍ಲೈನ್  ಮೂಲಕ ಸಲ್ಲಿಸಲು ವಿಶ್ವವಿದ್ಯಾನಿಲಯದ ಅಧಿಕೃತ ಅಂತರ್ಜಾಲ ತಾಣದಲ್ಲಿ ನೀಡಲಾದ faculty.mangaloreuniversity.in ರಲ್ಲಿ ಅಂತಿಮ ದಿನಾಂಕದೊಳಗಾಗಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು  ಜೂನ್ 13 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಸಲ್ಲಿಸಬೇಕಾದ ದಾಖಲೆಗಳು (ಸ್ವಯಂ ದೃಢೀಕೃತ) 

ಎಸ್.ಎಸ್.ಎಲ್.ಸಿ. ಅಂಕಪಟ್ಟಿ,ಸ್ನಾತಕ ಮತ್ತು ಸ್ನಾತಕೋತ್ತರ ಅಂಕಪಟ್ಟಿಗಳು ಹಾಗೂ ಪದವಿ ಪ್ರಮಾಣ ಪತ್ರಗಳು, ಯು.ಜಿ.ಸಿ/ಎನ್.ಇ.ಟಿ./ಎಸ್.ಎಲ್.ಇ.ಟಿ. ಉತ್ತೀರ್ಣತೆ/ ಪಿ.ಹೆಚ್.ಡಿ./  ಎಂ.ಫಿಲ್(M.Phil)ಪದವಿ ಪ್ರಮಾಣ ಪತ್ರಗಳು, ಸಂಶೋಧನಾ ಪತ್ರಿಕೆಗಳು (SCOPUS/WOS/UGC-CARELIST).

ಕೊನೆಯ ದಿನಾಂಕದ ನಂತರ ಸ್ವೀಕೃತಿಯಾದ ಮತ್ತು ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಯುಜಿಸಿ ನಿಗದಿಪಡಿಸಿದ ಮಾನದಂಡ ಹಾಗೂ ಕರ್ನಾಟಕ ಸರ್ಕಾರದ ಮೀಸಲಾತಿ ಆದೇಶದನುಸಾರ ಮಾಡಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯದ ಯಾವುದೇ ಘಟಕ ಕಾಲೇಜುಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರಬೇಕು. ಈ ಕುರಿತು ವಿಶ್ವವಿದ್ಯಾನಿಲಯದ ತೀರ್ಮಾನವೇ ಅಂತಿಮವಾಗಿರುತ್ತದೆ. ಅಭ್ಯರ್ಥಿಗಳು ಮರುಪಾವತಿಸಲಾಗದ (Non-Refundable) ಅರ್ಜಿ ಶುಲ್ಕ ರೂ. 250 ಹಾಗೂ(ಎಸ್.ಸಿ/ಎಸ್.ಟಿ/ಅಚಿಣ-1 ಅಭ್ಯರ್ಥಿಗಳಿಗೆ ರೂ.125/) ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ ïwww.mangaloreuniversity.ac.in ನ Online fees collection ನಲ್ಲಿರುವonline payment "005/60-Guest Faculty Application fee"ಗೆ  ಲಿಂಕ್ ಮುಖಾಂತರ ಪಾವತಿಸಿ ಇ-ರಿಸಿಪ್ಟ್‍ಅರ್ಜಿಯೊಂದಿಗೆ ಅಪ್‍ಲೋಡ್ ಮಾಡಬೇಕು. ಸಂದರ್ಶನದ ದಿನಾಂಕವನ್ನು  ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.