ಮಂಗಳೂರು, ಮಾ. 26: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ಕಾರವಾರ ಕ್ರೀಡಾ ವಸತಿ ನಿಲಯಕ್ಕೆ ಸೇಲಿಂಗ್, ಕಯಾಕಿಂಗ್ ಮತ್ತು ಕೆನೊಯಿಂಗ್ ವಿಭಾಗಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಎಪ್ರಿಲ್ 2 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಸಲಾಗುತ್ತದೆ.
4ನೇ ಮತ್ತು 7ನೇ ತರಗತಿಯಲ್ಲಿ ಪಾಸಾಗಿರುವ ಹಾಗೂ 2025 ರ ಜೂನ್ 1 ರಂದು 11 ಮತ್ತು 14 ವರ್ಷಗಳನ್ನು ಮೀರದ ಬಾಲಕರಿಗೆ ಪ್ರವೇಶಾವಕಾಶ ನೀಡಲಾಗುತ್ತದೆ. ಭಾಗವಹಿಸುವ ವಿದ್ಯಾರ್ಥಿಗಳು ಜನನ ದಿನಾಂಕವನ್ನು ದೃಢೀಕರಿಸುವ ದಾಖಲೆಯನ್ನು ತರಬೇಕು.
ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ದೂರವಾಣಿ ಸಂಖ್ಯೆ 0824- 2451264 ಸಂಪರ್ಕಿಸಬಹುದು. ಆಯ್ಕೆ ಪ್ರಕ್ರಿಯೆಯಲ್ಲಿ ಜಿಲ್ಲೆಯ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.