ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ಚರ್ಚ್ ವ್ಯಾಪ್ತಿಯ 10 ವಾರ್ಡ್ ಗಳ 82 ಮಂದಿ ಹಿರಿಯ ನಾಗರಿಕರು ಭಾಗವಹಿಸಿದ್ದರು. ಪ್ರಾರಂಭದಲ್ಲಿ  ಬಲಿ ಪೂಜೆ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ  ವಂದನೀಯ ಫಾ. ರಿಚಾರ್ಡ್ ಕ್ವಾಡ್ರಸ್ ಅವರು ಹಿರಿಯ ನಾಗರಿಕರು ನಮಗೆ ದಾರಿ ದೀಪವಾಗಿದ್ದಾರೆ ಎಂದು ಹೇಳಿದರು. ಚರ್ಚಿನ ಪ್ರದಾನ ಧರ್ಮ ಗುರು ವಂದನೀಯ ಫಾ. ಆಲ್ಬನ್ ಡಿ ಸೋಜಾ ಅವರು ಹಿರಿಯ ನಾಗರಿಕರಿಗೆ ಹಿತ ವಚನ ನೀಡಿದರು.

ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಪ್ಯಾಟ್ಸಿ ಮೊಂತೇರೊ, ಸ್ವಾಗತಿಸಿದರು. ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ , ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಉಪಸ್ಥಿತರಿದ್ದರು. ಹಿರಿಯ ನಾಗರಿಕರ ಪರವಾಗಿ ಚಾಲ್ರ್ಸ್ ಡಿಮೆಲ್ಲೊ ತಮ್ಮ ಅನಿಸಿಕೆ ಹೇಳಿದರು. ಪ್ಲಾವಿಯಾ ಡಿ ಸೋಜಾ ಕಾರ್ಯಕ್ರಮ ನಿರ್ವಹಿಸಿದರು. ಸಿರಿಲ್ ಫೆರ್ನಾಂಡಿಸ್  ಮತ್ತು ತಂಡದವರು ಕಿರು ನಾಟಕ ಪ್ರದರ್ಶಿಸಿದರು. ಚಾಲ್ರ್ಸ್ ಫೆರ್ನಾಂಡಿಸ್ ನಗೆ ಹನಿ ಪ್ರದರ್ಶನ ನೀಡಿದರು.