ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದೊಂದಿಗೆಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಕ್ಟೋಬರ್ 7 ರಂದು ಬೆಳಿಗ್ಗೆ 10.30 ಗಂಟೆಗೆ ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.
ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.