ಮಂಗಳೂರು: ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಯಲ್ಲಿ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಯೋಜನೆಗೆ ಅನ್ಲೈನ್ ಅರ್ಜಿಅಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು, ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರೂ. 2ಲಕ್ಷ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಗೆ ರೂ. 2.50ಲಕ್ಷ ಒಳಗಿರಬೇಕು. ಅರ್ಜಿಯನ್ನು ಎಸ್.ಎಸ್.ಪಿಪೋರ್ಟಲ್ https://ssp.postmatric.karnataka.gov.in ಮೂಲಕ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್ಸೈಟ್ https://dom.karnataka.gov.in ಅಥವಾ ಎಸ್.ಎಸ್.ಪಿಪೋರ್ಟಲ್ https://ssp.postmatric.karnataka.gov.in (ಸಹಾಯವಾಣಿ: 8277799990)ಸಂಪರ್ಕಿಸಬಹುದು ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಕ್ಕೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.