ಮಂಗಳೂರು: ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಹಾಸ್ಟೆಲ್‍ಸಹಿತ ಹೋಟೆಲ್ ಮ್ಯಾನೇಜ್‍ಮೆಂಟ್ ವೃತ್ತಿಪರ ತರಬೇತಿಯನ್ನು ಇನ್‍ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್, ಬೆಂಗಳೂರು ಇಲ್ಲಿ ನೀಡಲಾಗುತ್ತಿದ್ದು, ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ವೆಬ್‍ಸೈಟ್ https://sevasindhuservices.karnataka.gov.in/login.do ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಆಗಸ್ಟ್ 2 ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‍ಸೈಟ್ https://dom.karnataka.gov.in ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.