ಮಂಗಳೂರು: 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ತೊಕ್ಕೊಟ್ಟು ಶಾಖೆ ವತಿಯಿಂದ ದೇರಳಕಟ್ಟೆ ಬೆಳ್ಳ, ಸೇವಾಶ್ರಮ ವೃದ್ದಾಶ್ರಮದಲ್ಲಿ ಹಿರಿಯರಿಗೆ ಅಗತ್ಯ ವಸ್ತುಗಳ ವಿತರಣಾ ಕಾರ್ಯಕ್ರಮ ಆಗಸ್ಟ್ 30 ರಂದು ನಡೆಯಿತು.

ಈ ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ರವರು ಉದ್ಘಾಟಿಸಿ, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ತೊಕ್ಕೊಟ್ಟು ಶಾಖೆ ಸೇವಾಶ್ರಮಗೆ ನೀಡಿದ ಕೊಡುಗೆಯನ್ನು ಶ್ಲಾಘಿಸಿದರು. ಸಮಾಜದಲ್ಲಿ ಕೋ. ಆಪರೇಟಿವ್‌ ಸೊಸೈಟಿ ಸಂಸ್ಥೆಗಳು ಇಂತಹ ಕಾರ್ಯದಲ್ಲಿ ತೊಡಗಿಸಿಕೊಂಡು ಸಮಾಜದ ಏಳಿಗೆಗೆ ಕೈಜೋಡಿಸಿ ಕೊಂಡಿರುವುದು ಆದರ್ಶ ಪ್ರಾಯವೆಂದರು. ಸಾಗರ್ ಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಸಂಸ್ಥೆಯ ಪರಿಚಯವನ್ನು  ಸೂರ್ಯಕಾಂತಿ ನೀಡಿದರು. ಮಿಥುನ್ ಕುಮಾರ್ ಸ್ವಾಗತ ಭಾಷಣ ಮಾಡಿದರು. ಪ್ರಮಿತಾ ಲೋಬೋ ಧನ್ಯವಾದ ಅರ್ಪಿಸಿದರು.

ಈ ಸಂದರ್ಭದಲ್ಲಿ ಅಖಿಲ ಭಾರತ ಕ್ರಿಶ್ಚಿಯನ್ ಒಕ್ಕೂಟ ರಾಜ್ಯಾ ಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜಾ, ಅಭಿವೃದ್ಧಿ ವ್ಯವಸ್ಥಾಪಕ ನಾಗರಾಜ್ ವಿಷು ಸಿ.ಕೆ. ಹಾಗೂ ಮಡಿವಾಳ್‌, ತೊಕ್ಕೊಟ್ಟು ಶಾಖಾ ವ್ಯವಸ್ಥಾಪಕರಾದ ವಿಷ್ಣು ಸಿಬ್ಬಂದಿ ಉಪಸ್ಥಿತರಿದ್ದರು.