ವರದಿ ರಾಯಿ ರಾಜಕುಮಾರ

ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸಭೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನವೆಂಬರ್ 11ರಂದು ಜರಗಿತು. 

ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ವಿಜಯ್ ಚೌಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಷಯಗಳ ಬಗ್ಗೆ ಅಧಿಕಾರಿಗಳು ವಿಚಾರಗಳನ್ನು ಮಂಡಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು. ಹೆಚ್ಚಿನ ಅಧಿಕಾರಿಗಳು ಕೂಡ ಭಾಗವಹಿಸಿ ಹಲವಾರು ಮಾಹಿತಿಗಳನ್ನು ಹಂಚಿಕೊಂಡರು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ಇತರ ಎಲ್ಲಾ ಮುಖ್ಯ ಅಧಿಕಾರಿಗಳು ಹಾಜರಿದ್ದರು.