ಮಂಗಳೂರು: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯ ಪ್ರಯುಕ್ತ ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಕಣಚೂರು ಆಯುರ್ವೇದ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ, ಮಂಗಳಾ ಆಸ್ಪತ್ರೆಯ ಮೂಲವ್ಯಾಧಿ ಕ್ಷಾರ ಚಿಕಿತ್ಸಕ ಹಾಗೂ ಗಜಲ್ ಕವಿ, ಬರಹಗಾರ ಡಾ. ಸುರೇಶ್ ನೆಗಳಗುಳಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಆಯೋಜಕ, ಖಿದ್ಮಾ ಫೌಂಡೇಶನ್ ಅಧ್ಯಕ್ಷ ಆಮಿರ್ ಅಶ್ಅರೀ ಬನ್ನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ನೆಲೆಯಲ್ಲಿ ದೇಶಾದ್ಯಂತ ನೆಲಸಿರುವ ಅರುವತ್ತೈದಕ್ಕೂ ಹೆಚ್ಚಿನ ಕನ್ನಡ ಪ್ರಜೆಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.