ಮಂಗಳೂರು ಜೂ.6: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸಾಲ-ಸೌಲಭ್ಯವನ್ನು ಪಡೆಯಲುಅರ್ಜಿ ಆಹ್ವಾನಿಸಲಾಗಿದೆ. 

ನಿಗಮದ ಯೋಜನೆಗಳ ವಿವರ:- ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರಸಾಲ ಯೋಜನೆ), ಜೀಜಾವು ಜಲಭಾಗ್ಯ ಯೋಜನೆ(ಗಂಗಾ ಕಲ್ಯಾಣ ಯೋಜನೆ),ಅರಿವು-ಶೈಕ್ಷಣಿಕ ನೇರಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ  ಸಾಲ ಯೋಜನೆ, ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ಸ್ವಯೋ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ.

ಅರ್ಜಿ ಸಲ್ಲಿಸಲುಬೇಕಾದ ಅರ್ಹತೆಗಳು:-1)ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, 

4) ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು,  5)ಸರ್ಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. 6)ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.)ಅರ್ಜಿ ಸಲ್ಲಿಸಲು ಕೊನೆಯ ಆಗಸ್ಟ್ 31. 

ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ: 8867537799 ಸಂಪರ್ಕಿಸಬಹುದು. ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಛೇರಿ ವಿಳಾಸಗಳನ್ನು ವೆಬ್‍ಸೈಟ್ https://kmcdc.karnataka.gov.in ಮೂಲಕ ಪಡೆಯಬಹುದಾಗಿದೆ ಎಂದುಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.