ಮಂಗಳೂರು: ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವು ಅಕ್ಟೋಬರ್ 10ರಂದು ಮಧ್ಯಾಹ್ನ 3 ಗಂಟೆಗೆ ಅಡ್ಯಾರ್ ಗಾರ್ಡನ್‍ವಿ.ಕೆ ಶೆಟ್ಟಿ ಅಡಿಟೋರಿಯಂನಲ್ಲಿ ಕಾರ್ಮಿಕ ಸಚಿವರ ಸಮ್ಮುಖದಲ್ಲಿ ನಡೆಯಲಿದೆ ಎಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
