ಮಂಗಳೂರು ಅ.01: ಶಕ್ತಿ ಪ.ಪೂ. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸ್ಟೀವ್ ಜೆಫ್ ಲೋಬೊ ಇವರು ಸೆ. 29ರಂದು ಉಡುಪಿಯ ಅಜ್ಜರಕಾಡು ಈಜು ಕೊಳದಲ್ಲಿ ನಡೆದಂತಹ ಮೈಸೂರು ವಿಭಾಗೀಯ ಮಟ್ಟದ ದಸರಾ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ 2 ಚಿನ್ನದ ಪದಕಗಳನ್ನು ಪಡೆದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.
ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೈಕ್, ಕಾರ್ಯದರ್ಶಿ ಸಂಜಿತ್ ನಾೈಕ್, ಪ್ರಧಾನ ಸಲಹೆಗಾರರಾದ ರಮೇಶ್ ಕೆ. ಶಕ್ತಿ ಪದವಿಪೂರ್ವಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಹೆಚ್‍ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಶುಭಹಾರೈಸಿದರು.