ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಜತೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಧೃವನಾರಾಯಣ್, ಎಂಎಲ್ಸಿ ಬಿ.ಕೆ. ಹರಿಪ್ರಸಾದ್, ಮಾಜಿ ಸಚಿವರಾದ ರಮಾನಾಥ ರೈ, ಯು.ಟಿ. ಖಾದರ್, ಅಭಯಚಂದ್ರ ಜೈನ್, ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಶಕುಂತಲಾ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.