ಮಂಗಳೂರು: ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆಗೊಳಿಸುವ ನಿಟ್ಟಿನಲ್ಲಿ ಕೆಪಿಸಿಸಿಯ ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಸಮಿತಿಯ ಅಧ್ಯಕ್ಷ ಸಲೀಂ ಅಹ್ಮದ್ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಆಕಾಂಕ್ಷಿಗಳ ಸಭೆ ಸೋಮವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರಗಿತು.
ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ವಿವಿಧ 47 ಮಂದಿ ಆಕಾಂಕ್ಷಿಗಳನ್ನು ಪತ್ಯೇಕ ಆಹ್ವಾನಿಸಿ ಮಾತನಾಡಿ ಅಭಿಪ್ರಾಯ ಸಂಗ್ರಹಿಸಲಾಯಿತು. ಈ ಬಗ್ಗೆ ಆಯಾ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು ಹಾಗೂ ಜಿಲ್ಲಾ ಪ್ರಮುಖ ನಾಯಕರುಗಳೊಂದಿಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲಾಯಿತು.
ಈ ಸಂದರ್ಭ ಚುನಾವಣಾ ಸಮಿತಿ ಸದಸ್ಯ ರೆಹಮಾನ್ ಖಾನ್, ಕೆಪಿಸಿಸಿ ಉಪಾಧ್ಯಕ್ಷ ಮಧುಬಂಗಾರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಉಪಸ್ಥಿತರಿದ್ದರು.