ಮಂಗಳೂರು: ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಸಂಘದ ಪಧಾಧಿಕಾರಿಗಳ ಸಭೆಯ ಇಂದು ನಗರದ ದಿ ಓಶಿಯನ್ ಪರ್ಲ್ ಹೊಟೇಲ್‍ನ ಸಭಾಂಗಣದಲ್ಲಿ ನಡೆಯಿತು. ಈ ಸಭೆಯು ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ವಹಿಸಿದರು. ಸಂಘದ ಸದಸ್ಯತ್ವ ಅಭಿಯಾನವನ್ನು ರಾಜ್ಯವ್ಯಾಪಿ ಒಂದು ತಿಂಗಳು ಕಾಲ ನಡೆಸಬೇಕೆಂದು ಈ ಸಂದರ್ಭದಲ್ಲಿ ತಿರ್ಮಾನಿಸಲಾಯಿತು. ಪದವಿ ಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳ ಕುರಿತಂತೆ ಶಿಕ್ಷಣ ಸಚಿವರಾದ ಬಿ. ಸಿ. ನಾಗೇಶ್‍ರ ಜೊತೆ ಫೆ 08ರಂದು ವಿಧಾನಸೌಧದಲ್ಲಿ ಪ ಪೂ ಶಿಕ್ಷಣಕ್ಕೆ ಸಂಬಂಧಿಸಿದ ಪ್ರಧಾನ ಕಾರ್ಯದರ್ಶಿಗಳು, ನಿರ್ದೇಶಕರು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ಬೇಡಿಕೆಯ ಪಟ್ಟಿಯನ್ನು ಮುಂದಿಟ್ಟು ಸಭೆ ನಡೆಸಿ ಸಮಸ್ಯೆಗೆ ಪರಿಹಾರ ಒದಗಿಸಲು ನಿರ್ಣಯ ಕೈಗೊಳ್ಳಲಾಯಿತು. ದ.ಕ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಅನುದಾನ ರಹಿತ 100ಕ್ಕೂ ಅಧಿಕ ಪದವಿ ಪೂರ್ವ ಕಾಲೇಜುಗಳನ್ನು ಸದಸ್ಯತ್ವ ಮಾಡಬೇಕೆಂದು ಸಭೆಯಲ್ಲಿದ್ದ ಎಲ್ಲರೂ ಅಭಿಪ್ರಾಯ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಎಲ್ಲಾ ಪಪೂ ಕಾಲೇಜುಗಳು ಒಟ್ಟಾಗಿ ಕಾರ್ಯಪ್ರವೃತ್ತರಾಗುವಂತೆ ಅಧ್ಯಕ್ಷರು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎಕ್ಸ್‍ಪರ್ಟ್ ಸಂಸ್ಥೆ ಅಧ್ಯಕ್ಷರಾದ ಪ್ರೋ. ನರೇಂದ್ರ ನಾಯಕ್, ಶಾರದಾ ಸಂಸ್ಥೆಯ ಅಧ್ಯಕ್ಷರಾದ ಎಂ.ಬಿ. ಪುರಾಣಿಕ್, ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಡಾ.ಕೆ.ಸಿ. ನಾೈಕ್, ಜ್ಞಾನಸುಧಾ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಎಕ್ಸ್‍ಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಸುರಾಜ್ ಇಂಟರ್ ನ್ಯಾಷನಲ್ ಸಂಸ್ಥೆಯ ಅಧ್ಯಕ್ಷರಾದ ಡಾ. ಮಂಜುನಾಥ್ ರೇವಣ್ಕರ್, ದಂಡ ತೀರ್ಥ ಪ ಪೂ ಕಾಲೇಜಿನ ಅಧ್ಯಕ್ಷರಾದ ಅಲ್ಬರ್ಟ್‍ರೊಡ್ರಿಗೇಸ್, ಶಕ್ತಿ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್. ಕೆ, ಎಕ್ಸ್‍ಪರ್ಟ್‍ನ ಕರುಣಾಕರ ಬಲ್ಕೂರ ಉಪಸ್ಥಿತರಿದ್ದರು.