ಚಿತ್ರ: ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿದರು.
ಉಜಿರೆ: ಸಚಿವ ಕೆ.ಎಸ್. ಈಶ್ವರಪ್ಪ ಭಾನುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು.
ಶಾಸಕ ಹರೀಶ್ ಪೂಂಜ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉಪಸ್ಥಿತರಿದ್ದರು.