ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ: ವಿವಿಧೋದ್ದೇಶ ಸಹಕಾರಿ ಸಂಘದ ಸಭೆ ಸಮಾಜ ಮಂದಿರದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಿಗೆ 12 ಶೇಕಡಾ ಡಿವಿಡೆಂಡ್ ಘೋಷಿಸಿದೆ.
ಇದೇ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ರಾಜ್ಯ ಮಟ್ಟದ ಸಾಧನೆ ಮಾಡಿ ಉದಯೋನ್ಮುಖ ಕೃಷಿ ಪಂಡಿತ ಪ್ರಶಸ್ತಿ ಪಡೆದ ಮೂಡುಬಿದಿರೆ ಅಂಬೂರಿಯ ಡಾ. ನಾಗರಾಜ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಜನ್ಯ ಶೆಟ್ಟಿ ಸ್ವಾಗತಿಸಿದರು. ನಿರ್ದೇಶಕ ದಯಾನಂದ ಕಾರ್ಯಕ್ರಮ ನಿರ್ವಹಿಸಿದರು.