ಮೂಡುಬಿದಿರೆ: ಬೆಂಗಳೂರಿನಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಆಳ್ವಾಸ್ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸ್‍ಸ್ ಕಾಲೇಜಿನ ಪ್ರಾಂಶುಪಾಲೆ ಡಾ ವನಿತಾ ಶೆಟ್ಟಿಯವರಿಗೆ ಆರೋಗ್ಯ ವಿಜ್ಞಾನದ ಶೈಕ್ಷಣಿಕ ವಲಯಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಶ್ರೇಷ್ಠ ಶಿಕ್ಷಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ ಶರಣ ಪ್ರಕಾಶ ಪಾಟೀಲ ಪ್ರಶಸ್ತಿ ನೀಡಿ ಗೌರವಿಸಿದರು. ಇವರು ಆಳ್ವಾಸ್ ನ್ಯಾಚುರೋಪಥಿ ಕಾಲೇಜಿನಲ್ಲಿ ಕಳೆದ 18 ವರ್ಷಗಳಿಂದ ಪ್ರಾಚಾರ್ಯೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಕರ್ನಾಟಕದ ನ್ಯಾಚುರೋಪಥಿ ಮತ್ತು ಯೋಗಿಕ್ ಸೈನ್ಸ್‍ಸ್ ಕಾಲೇಜುಗಳ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.