ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಾಡ್ಯಾರು ಇಲ್ಲಿ ಮಾದಕ ದ್ರವ್ಯ ವ್ಯಸನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪೊಲೀಸ್ ಇನ್ಸ್ಪೆಕ್ಟರ್ ಭಾರತಿ ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳ ಬಗ್ಗೆ , ಪೋಕ್ಸೋ ಕಾಯ್ದೆಯ ಬಗ್ಗೆ, ವಾಹನಗಳಲ್ಲಿ ಹೋಗುವಾಗ ವಹಿಸಬೇಕಾದ ಜವಾಬ್ದಾರಿಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಹೇಳಿದರು.
ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಪೋಷಣ್ ಅಭಿಯಾನದ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ನಿವೃತ್ತ ಬ್ಯಾಂಕ್ ಸಿಬ್ಬಂದಿ ಶೀನ ಎಂ ಇವರು ಭಾಗವಹಿಸಿ ಆಷಾಡ ಮಾಸದ ಆಚರಣೆಯ ಬಗ್ಗೆ ಮತ್ತು ಶಾಲೆಯಲ್ಲಿ ನೀಡುತ್ತಿರುವ ಆಹಾರದಲ್ಲಿನ ಪೌಷ್ಟಿಕತೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾನ್ಸ್ಟೇಬಲ್ ವೆಂಕಟೇಶ್ ಭಾಗವಹಿಸಿದ್ದರು. ಮುಖ್ಯೋಪಾಧ್ಯಾಯ ಪ್ರಸನ್ನ ಶೆಣೈ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕ ರಾಬರ್ಟ್ ಡಿಸೋಜಾ ವಂದಿಸಿದರು. ಗೌರವ ಶಿಕ್ಷಕಿ ಪ್ರತಿಭಾ ಅಕ್ಷರ ದಾಸೋಹ ಸಿಬ್ಬಂದಿ ಕಸ್ತೂರಿ ಅಂಚನ್ ಉಪಸ್ಥಿತರಿದ್ದರು.