ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 41.7 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ 3 ವಿವೇಕ ಶಾಲಾ ಕೊಠಡಿಯನ್ನು ಜೂನ್ 9 ರಂದು ಉದ್ಘಾಟಿಸಲಾಯಿತು.
ಶಾಸಕ ಉಮಾನಾಥ ಕೋಟ್ಯಾನ್ ಅವರು ಉದ್ಘಾಟನೆ ನೆರವೇರಿಸಿ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡುವುದಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತದೆ. ಹೆತ್ತವರು ಕೂಡಾ ಮಕ್ಕಳನ್ನು ಸರಕಾರಿ ಶಾಲೆಗಳಲ್ಲಿ ಸೇರಿಸುವ ಮೂಲಕ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಿಳಿಸಿದರು.