ವರದಿ ರಾಯಿ ರಾಜಕುಮಾರ
ಮೂಡುಬಿದಿರೆ ಮಹಾವೀರ ಪ.ಪೂ.ಕಾಲೇಜು ಎನ್.ಎಸ್.ಎಸ್., ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ, ಶಿರ್ತಾಡಿ- ವಾಲ್ಪಾಡಿ ಗ್ರಾಮ ಪಂಚಾಯತ್ ಇವುಗಳ ಸಹಯೋಗದೊಂದಿಗೆ ಸ್ವಚ್ಛತಾ ಅಭಿಯಾನ ಜರುಗಿತು.
ಮಹಾವೀರ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ ರವರು ಸ್ವಚ್ಛತಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ ನಮ್ಮ ಊರು ನಮ್ಮ ಪರಿಸರವನ್ನು ನಾವೇ ಸ್ವಚ್ಛವಾಗಿ ಇಟ್ಟುಕೊಂಡಾಗ ಗ್ರಾಮ ದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ ಬಿ, ಶಿರ್ತಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್ ಪ್ರವೀಣ್ ಜೈನ್, ಕಾಂಗ್ರೆಸ್ ಮುಖಂಡರಾದ ಸುರೇಶ್ ಕೋಟ್ಯಾನ್, ವಲೇರಿಯನ್ ಸಿಕ್ವೆರಾ, ಶಿರ್ತಾಡಿ ಗ್ರಾಮ ಪಂಚಾಯತ ಅಧ್ಯಕ್ಷ ಆಗ್ನೆಸ್ ಡಿಸೋಜಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ, ವಾಲ್ಪಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುಳಾ ಹುನಗುಂದ, ಪಂಚಾಯತ್ ಕಾರ್ಯದರ್ಶಿಗಳಾದ ಸುನಂದ, ದಾಮೋದರ್, ಶೇಖರ, ಕಾಲೇಜು ಪ್ರಾಂಶುಪಾಲೆ ವಿಜಯಲಕ್ಷ್ಮಿ ಕೆ ಮಾರ್ಲ, ಎನ್ಎಸ್ಎಸ್ ಅಧಿಕಾರಿ ರಶ್ಮಿತಾ ವೇದಿಕೆಯಲ್ಲಿದ್ದರು. ಜೈಸನ್ ಪಿರೇರಾ ಕಾರ್ಯಕ್ರಮ ನಿರೂಪಿಸಿದರು. ಎನ್ಎಸ್ಎಸ್ ವಿದ್ಯಾರ್ಥಿಗಳು, ಊರವರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.