ವರದಿ ರಾಯಿ ರಾಜಕುಮಾರ
ಮೂಡುಬಿದರೆ ತಾಲೂಕಿನ ಜ್ಯೋತಿನಗರ ಕ್ಲಸ್ಟರ್ ನ ಪ್ರತಿಭಾ ಕಾರಂಜಿ ನವೆಂಬರ್ 18ರಂದು ಹೋಲಿ ರೋಜರಿ ಪ್ರೌಢಶಾಲೆಯಲ್ಲಿ ಜರುಗಿತು. ಕ್ಲಸ್ಟರ್ ನ ಎಲ್ಲಾ ಶಾಲೆಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.


ಆಗಮಿಸಿದ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯಣಿ ಭಗಿನಿ ಸುನೀತ ಮೊಂತೇರೊ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಎಲ್ಲ ರೀತಿಯ ಅಚ್ಚುಕಟ್ಟತನದೊಂದಿಗೆ ಶ್ರಮಿಸುತ್ತಿರುವ ಎಲ್ಲ ಶಿಕ್ಷಕರನ್ನು ತಾಲೂಕು ಪ್ರತಿಭಾ ಕಾರಂಜಿ ನೋಡಲ್ ಶಿಕ್ಷಣ ಸಂಯೋಜಕ ರಾಜೇಶ್ ಭಟ್ ಅಭಿನಂದಿಸಿದರು.

ವೇದಿಕೆಯಲ್ಲಿ ಜ್ಯೋತಿನಗರ ಕ್ಲಸ್ಟರ್ ಸಿ ಆರ್ ಪಿ ಮಹೇಶ್ವರಿ, ಕ್ಲಸ್ಟರ್ ಪ್ರತಿಭಾ ಕಾರಂಜಿ ಉಸ್ತುವಾರಿ ನಾಗರತ್ನ, ಶಾಲಾ ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷೆ ಪ್ರಮೀಳಾ ಡಿಸೋಜ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಶಶಿಕಾಂತ್ ವೈ, ಹಾಜರಿದ್ದರು. ಶಿಕ್ಷಕಿ ರೇಷ್ಮಾ ಕಾರ್ಯಕ್ರಮ ನಿರ್ವಹಿಸಿದರು. ರಾಮಕೃಷ್ಣ ಶಿರೂರು ವಂದಿಸಿದರು.