ಮಂಗಳೂರು, ಜು.30: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ 50ನೇ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಅಗಿ ಪಿ.ಬಿ.ಹರೀಶ್ ರೈ ಆಯ್ಕೆ ಆಗಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಮೂಲತಃ ಹರೀಶ್ ರೈ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದು, ಪ್ರಸ್ತುತ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದಾರೆ.