ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ಪರಿಸರ ಕ್ಲಬ್ಗಳ ಸಹಯೋಗದೊಂದಿಗೆ  ವಿಶ್ವ ಪರಿಸರ ದಿನವನ್ನು ಆಚರಿಸಿತು ಅಂತರಾಷ್ಟ್ರೀಯ ಜೀವವೈವಿಧ್ಯ ದಿನವನ್ನು ಆಚರಿಸಲಾಯಿತು. 

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲತಾ ಜಿ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಅವರು ಪರಿಸರ ಹಾಗೂ ಜೀವ ವೈವಿಧ್ಯತೆಯ ಬಗ್ಗೆ ಸ್ಪೂರ್ತಿದಾಯಕ ಮಾತುಗಳನ್ನಾಡಿದರು.  ಮತ್ತು "ನಾವು ಸಂಪನ್ಮೂಲಗಳನ್ನು ಸಂರಕ್ಷಿಸಬೇಕು, ಹಲವಾರು ವಸ್ತುಗಳನ್ನು ಮರುಬಳಕೆ ಮಾಡಬೇಕು ಹಾಗು  ಹಸಿ ತ್ಯಾಜ್ಯವಸ್ತುಗಳನ್ನು  ಕಾಂಪೋಸ್ಟ್ ಮಾಡಿ ಭೂಮಿಯ ಫಲವತ್ತತೆಯನ್ನು ಉಳಿಸುವಲ್ಲಿ ನೆರವಾಗಬೇಕು. ಭೂಮಿಯು ಮುಂದಿನ ಪೀಳಿಗೆಗೆ ಸೇರಿದೆ. ಅದರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ನೈಸರ್ಗಿಕ ಸಂಪನ್ಮೂಲಗಳ ಸಮರ್ಪಕ ಬಳಕೆಯಾಗಬೇಕು" ಎಂದು ಹೇಳಿದರು 

ಕಾರ್ಯಕ್ರಮದ ಗೌರವಾನ್ವಿತ ಅತಿಥಿಯಾಗಿ ಪುತ್ತೂರು ವಲಯ ಅರಣ್ಯಾಧಿಕಾರಿಗಳಾದ   ಕಿರಣ ಬಿ ಎಂ ರವರು ಕ್ಷೀಣಿಸಿದ ಅಥವಾ ಅಳಿವಿನಂಚಿನಲ್ಲಿರುವ ಪ್ರಾಣಿಗಳ  ಆವಾಸಸ್ಥಾನಗಳನ್ನು ಮರುಸ್ಥಾಪಿಸುವುದು, ಈ ಮೂಲಕ ಮತ್ತಷ್ಟು ಹಾನಿಯನ್ನು ತಡೆಗಟ್ಟುವುದು, ಸಂಪನ್ಮೂಲಗಳ ಮಿತ ಹಾಗೂ ಮರುಬಳಕೆಯ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೇರೊರವರು ವಿದ್ಯಾರ್ಥಿಗಳನ್ನುದ್ದೇಶಿಸಿ “ಮಾನವರ ಅವೈಜ್ಞಾನಿಕ ಚಟುವಟಿಕೆಗಳ ಫಲವಾಗಿ  ಇಂದು ಪರಿಸರ ಮಾಲಿನ್ಯ ಉಂಟಾಗುತ್ತದೆ. ಅರಣ್ಯ ನಾಶ, ಅವೈಜ್ಞಾನಿಕ ಕೃಷಿ ಚಟುವಟಿಕೆಗಳು ಇಂದು ಪ್ರಾಕೃತಿಕ ಸಂಪನ್ಮೂಲಗಳಿಗೆ ಹಾನಿಯುಂಟುಮಾಡಿವೆ. ನಾವು ಭೂಮಿಯನ್ನು ಚೆನ್ನಾಗಿ ನೋಡಿಕೊಂಡಲ್ಲಿ ಅದು ನಮ್ಮನ್ನು ಚೆನ್ನಾಗಿಡಬಲ್ಲುದು” ಎಂದು ಹೇಳಿದರು. 

ಪ್ರತೀಕ್ಷಾ ಎ ಮತ್ತು ತಂಡ ಪ್ರಾರ್ಥನೆ ಸಲ್ಲಿಸಿದರು,  ಪ್ರತೀಕ್ಷಾ ಜಿ ಅತಿಥಿಗಳನ್ನು ಸ್ವಾಗತಿಸಿದರು,  ಟ್ರೀಸಾ ಸೆಲೆಸ್ಟಿಯಾ ಪಿ ವಿ ವಂದಿಸಿದರು ಮತ್ತು ಶ್ರಾವ್ಯ ಆರ್ ಎಸ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕೃಅದ  ಶಶಿಪ್ರಭಾ ಬಿ,  ಸ್ಮಿತಾ ಆಳ್ವ ಮತ್ತು  ಶ್ರೀರಕ್ಷಾ ಬಿ ವಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.