ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಸಂಘದ ವತಿಯಂದ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ʼಫಿಲೋ ಫೋರ್ಟೆ-2024 ʼಯನ್ನು ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿದ ಪ್ರಾಂಶುಪಾಲರಾದ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೇರೊ ರವರು ವಿದ್ಯಾರ್ಥಿಗಳನ್ನುದ್ದೇಶಿಸಿ “ವಿದ್ಯಾರ್ಥಿಗಳ ಸುಪ್ತಪ್ರತಿಭೆಗಳ ಅನಾವರಣಕ್ಕಾಗಿ ವಿದ್ಯಾರ್ಥಿ ಸಂಘದ ವತಿಯಿಂದ ಇಂತಹ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. 

ಇಂತಹ ವೇದಿಕೆಯು ಉದಯೋನ್ಮುಖ ಕಲಾವಿದರಿಗೆ ಅತಿಅಗತ್ಯ. ಹೆಚ್ಚಿನಸಂದರ್ಭಗಳಲ್ಲಿ ವಿದ್ಯಾರ್ಥಿಗಳಿಗೆಪರೀಕ್ಷೆಗಳು, ನಿಯೋಜಿತಕಾರ್ಯಳೇಮುಂತಾದಒತ್ತಡಗಳಿದ್ದು ಈ ದಿನಯಾವುದೇಒತತಡಗಳಿಗೊಳಗಾಗದೆಸಂತೋಷದಿಂದಕಳೆಯುವಂತಾಗಬೇಕು. ” ಎಂದು ಹೇಳಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಆಭಿನಂದಿಸಿದರು. 

ವೇದಿಕೆಯಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲರುಗಳಾದ ಡಾ| ಕೃಷ್ಣಕುಮಾರ್ ಪಿಎಸ್, ಡಾ| ವಿಜಯಕುಮಾರ್ ಎಂ, ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಬಿಪಿನ್, ಸಮೃದ್ಧಿ ಶೆಣೈ ಮತ್ತು ರಕ್ಷಾ ಉಪಸ್ಥಿತರಿದ್ದರು. 

ಕಾಲೇಜಿನ ಪ್ರಾಪ್ತಿ ರೈ ಮತ್ತು ಬಳಗ ಪ್ರಾರ್ಥಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಡಾ| ಚಂದ್ರಶೇಖರ್ ಕೆ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಜಸ್ಲಿನ್ ಡಿಕುನ್ಹ ವಂದಿಸಿದರು. ತೃತೀಯ ಬಿಸಿಎ ವಿದ್ಯಾರ್ಥಿನಿ ಬೃಂದಾ ಬಿ. ಜಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕಾಲೇಜಿನ ವಿದ್ಯಾರ್ಥಿಗಳಿಂದ ಭರತನಾಟ್ಯ, ಪ್ರಹಸನ, ಹಾಡುಗಳು ಪಾಶ್ಚಾತ್ಯ ನೃತ್ಯಗಳು ಮುಂತಾದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲಾಯಿತು.