ಮಂಗಳೂರು, ಆಗಸ್ಟ್ 2: ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರ ನೇತೃತ್ವದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಈ ವೇಳೆ ಪತ್ರಕರ್ತರ ಸಂಘ ಹಮ್ಮಿ ಕೊಂಡಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು .
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾದ್ಯಕ್ಷ ಭಾಸ್ಕರ್ ರೈ ಕಟ್ಟ ,ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್ , ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಮಹಮ್ಮದ್ ಆರಿಫ್ ಪಡುಬಿದ್ರಿ,ರಾಜೇಶ್ ದಡ್ಡಂಗಡಿ, ಸುಖಪಾಲ್ ಪೊಳಲಿ ಉಪಸ್ಥಿತರಿದ್ದರು.