ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಪಂಚಾಯತ್ ವ್ಯಾಪ್ತಿಯ ಮಕ್ಕಿ ಜವಾಹರ್ ಲಾಲ್ ನೆಹರು ಪ್ರೌಢಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ವಿವಿಧ ಮಾಹಿತಿಗಳನ್ನು ನೀಡಲಾಯಿತು.
ಬೆಂಗಳೂರು ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ಸಂಪನ್ಮೂಲ ವ್ಯಕ್ತಿ, ಪತ್ರಿಕಾ ವರದಿಗಾರ ರಾಯಿ ರಾಜಕುಮಾರ ಮೂಡುಬಿದಿರೆ ಯವರು ಪರಿಸರ ಸಂರಕ್ಷಣೆಯ ಅಗತ್ಯ, ಗ್ರಾಮೀಣ ಪ್ರದೇಶದಲ್ಲಿ ಕಲಿಯುವುದುರಿಂದ ಸರಕಾರದಿಂದ ಸಿಗುವ ಅನೇಕ ಲಾಭಗಳು, ಕನ್ನಡ ಮಾಧ್ಯಮದಲ್ಲಿಯೇ ಕಲಿಯುವುದರಿಂದಲೂ ದೊರಕುವ ಇನ್ನಿತರ ಹಲವಾರು ಸರಕಾರೀ ಸವಲತ್ತುಗಳ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಮುಖ್ಯ ಶಿಕ್ಷಕಿ ಸಾವಿತ್ರಿ ಸ್ವಾಗತಿಸಿ ವಂದಿಸಿದರು.