ಮಂಗಳೂರು ಪ್ರೆಸ್‍ಕ್ಲಬ್ ದಿನಾಚರಣೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ ಮಂಗಳೂರು ಪ್ರೆಸ್ ಕ್ಲಬ್‍ನ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ. 85 ಮತ್ತು ಅದಕ್ಕಿಂತ ಅಧಿಕ ಅಂಕ ಪಡೆದ ದಕ್ಷಿಣ ಕನ್ನಡಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಗುತ್ತದೆ. ಅರ್ಹ ವಿದ್ಯಾರ್ಥಿ/ ವಿದ್ಯಾರ್ಥಿನಿಯ ಭಾವಚಿತ್ರ,ಅಂಕ ಪಟ್ಟಿಯ ಪ್ರತಿಯ ದಾಖಲೆ, ಬ್ಯಾಂಕ್ ಪಾಸ್ ಪುಸ್ತಕದ ವಿವರ ಸಹಿತ ಪ್ರಧಾನ ಕಾರ್ಯದರ್ಶಿ, ಮಂಗಳೂರು ಪ್ರೆಸ್‍ಕ್ಲಬ್, ಪತ್ರಿಕಾ ಭವನ, ಲೇಡಿಹಿಲ್ - ಉರ್ವ ಮಾರ್ಕೆಟ್‍ರಸ್ತೆ, ಮಂಗಳೂರು-6ವಿಳಾಸಕ್ಕೆ 2026ರ ಜನವರಿ 5ರೊಳಗಾಗಿ ಕಳುಹಿಸುವಂತೆ ಪ್ರೆಸ್‍ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.