ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಕೃಷಿ ವಿಜ್ಞಾನ ಕೇಂದ್ರ ಮತ್ತು ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ ಬ್ರಹ್ಮಾವರ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ, ಕೃಷಿ, ತೋಟಗಾರಿಕೆ ಪಶು ಸಂಗೋಪನೆ, ಮೀನುಗಾರಿಕೆ ಅರಣ್ಯ ಇಲಾಖೆ ಉಡುಪಿ ಮತ್ತು ದ.ಕ ಜಿಲ್ಲೆ, ಜಿಲ್ಲಾ ಕೃಷಿಕ ಸಮಾಜ, ಉಡುಪಿ ಮತ್ತು ದ.ಕ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ, ಜಿಲ್ಲಾ ಪಂಚಾಯತ್, ಗೇರು ಮತ್ತು ಕೋಕೋ ಅಭಿವೃದ್ದಿ ನಿರ್ದೇಶನಾಲಯ ಕೊಚ್ಚಿ, ಬ್ಯಾಂಕ್ ಆಫ್ ಬರೋಡಾ(ವಿಜಯ ಗ್ರಾಮೀಣಾಭಿವೃದ್ದಿ ಪ್ರತಿಷ್ಠಾನ) ಉಡುಪಿ, ಕೆನರಾ ಬ್ಯಾಂಕ್, ವಾರಂಬಳ್ಳಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ(ರಿ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕೃಷಿ ಮೇಳವನ್ನು ಅ. 11 ಮತ್ತು 12 ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕೃಷಿ ಮತ್ತು ತೋಟಗಾರಿಕಾ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.