ಉಡುಪಿ: ಬಿ.ಇ/ ಬಿ.ಟೆಕ್ ಪದವೀಧರರಾಗಿದ್ದು, ಐ.ಐ.ಎಸ್.ಸಿ, ಐ.ಐ.ಟಿ ಮತ್ತು ಎನ್.ಐ.ಟಿ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಅಂಡ್ ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸುಗಳಲ್ಲಿ (ತರಬೇತಿ ಅವಧಿ ಕನಿಷ್ಟ 6 ತಿಂಗಳಿಂದ 1 ವರ್ಷ) ಭಾಗವಹಿಸುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಶಿಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 4 ರ ವರೆಗೆ ವಿಸ್ತರಿಸಲಾಗಿದೆ. 

ಆಸ್ತಕ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳು, ಐಟಿಡಿಪಿ ಕಛೇರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574814 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.