ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 2006-07 ನೇ ಸಾಲಿನಲ್ಲಿ ಭಾಗ್ಯಲಕ್ಷ್ಮೀ ಯೋಜನೆಯಡಿ ನೋಂದಾಯಿಸಿ, 18 ವರ್ಷ ಪೂರ್ಣಗೊಂಡಿರುವ ಅರ್ಹ ಫಲಾನುಭವಿಗಳಿಂದ (ಮರಣ ಹೊಂದಿರುವ ಹಾಗೂ ಅನರ್ಹ ಫಲಾನುಭವಿಗಳನ್ನು ಹೊರತುಪಡಿಸಿ) ಪರಿಪಕ್ವ ಮೊತ್ತ ರೂ. 32,351 ಅನ್ನು ಎಲ್.ಐ.ಸಿ ಸಂಸ್ಥೆಯಿಂದ ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 3405 ಫಲಾನುಭವಿಗಳನ್ನು ನೋಂದಾಯಿಸಿಕೊಂಡಿದ್ದು, ಅವರಲ್ಲಿ ಕೆಲವು ಫಲಾನುಭವಿಗಳು ವಲಸೆ ಹೋಗಿರುವುದು ಮತ್ತು ದಾಖಲಾತಿಗಳನ್ನು ತಡವಾಗಿ ಸಲ್ಲಿಸುತ್ತಿರುವುದು ಕಂಡುಬಂದಿದ್ದು, ಅರ್ಹ ಫಲಾನುಭವಿಗಳ ಮಾಹಿತಿಯನ್ನು ಆನ್‍ಲೈನ್ ನಲ್ಲಿ ಅಳವಡಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುವುದರಿಂದ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ Payment Module ನಲ್ಲಿ ಮಾಹಿತಿಯನ್ನು ಅಳವಡಿಸಿಕೊಳ್ಳಬಹುದಾಗಿದೆ.
2007-08 ನೇ ಸಾಲಿನಲ್ಲಿ ಸದರಿ ಯೋಜನೆಯಡಿ ನೋಂದಾಯಿಸಿ 18 ವರ್ಷ ಪೂರ್ಣಗೊಂಡಿರುವ ಅರ್ಹ ಫಲಾನುಭವಿಗಳಿಂದ ಪರಿಪಕ್ವ ಮೊತ್ತ ಪಾವತಿಗಾಗಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.