ಉಡುಪಿ, ಸೆ. 24: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪ್ರಸಕ್ತ ಸಾಲಿನ ಐ.ಇ.ಸಿ ಹಾಗೂ ಎಸ್.ಬಿ.ಸಿ.ಸಿ ಕಾರ್ಯಚಟುವಟಿಕೆಯಡಿ ಜಾನಪದ ಕಲಾ ಪ್ರಕಾರಗಳ ಮೂಲಕ ಜಿಲ್ಲೆಯಾದ್ಯಂತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಾನಪದ ಕಲಾತಂಡಗಳ ಅಗತ್ಯವಿರುವ ಹಿನ್ನೆಲೆ, ಜಿಲ್ಲೆಯಿಂದ ಸಾಂಗ್ ಆಂಡ್ ಡ್ರಾಮಾ ಡಿವಿಜನ್, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಇಲಾಖೆಯಲ್ಲಿ ನೋಂದಣಿಯಾಗಿರುವ ಹಾಗೂ ಆರೋಗ್ಯ ಇಲಾಖೆಯ ವಿಭಾಗೀಯ ಮಟ್ಟದಲ್ಲಿ ತರಬೇತಿ ಪಡೆದಿರುವ ಆಸಕ್ತ ಜಾನಪದ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕು.ಕ.ಕಚೇರಿ, ಐ.ಇ.ಸಿ ವಿಭಾಗವನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.