ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ವಿರುದ್ಧ ಗೆಲುವು ಸಾಧಿಸಿದ್ದಾರೆ.  ಮತ ಎಣಿಕೆ ಕೇಂದ್ರ ಎದುರು ಬಿಜೆಪಿ  ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ  ಅವರನ್ನು  ಕಾರ್ಯಕರ್ತರು ಮೇಲಕ್ಕೆತ್ತಿ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ  ಶಾಸಕರಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮೊದಲಾದವರು ಹಾಜರಿದ್ದರು.