ಉಡುಪಿ:  ನಗರಾಭಿವೃದ್ಧಿ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‍ಗಳ ಸಮೀಕ್ಷೆಯನ್ನು ನಡೆಸಲು ಅಕ್ಟೋಬರ್ 1 ರಂದು ಬೈಂದೂರು ಪಟ್ಟಣ ಪಂಚಾಯತ್ ಕಚೇರಿ, ಅ. 3 ರಂದು ಬೈಂದೂರು ಗ್ರಾಮದ ಗಂಗನಾಡು ಅಂಗನವಾಡಿ, ಅ. 4 ರಂದು ತಗ್ಗರ್ಸೆ ಅಂಗನವಾಡಿ ಮತ್ತು ಅ. 5 ರಂದು ಪಡುವರಿ ಸೋಮೇಶ್ವರ ಅಂಗನವಾಡಿಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ಗುರುತಿಸುವಿಕೆಯ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. 

ಒಣ ಶೌಚಾಲಯಗಳನ್ನು ಸ್ವಚ್ಛಗೊಳಿಸುವ, ಅನೈರ್ಮಲ್ಯ ಶೌಚಾಲಯಗಳಿಂದ ಹೊರಹೋಗಿ ತೆರೆದ ಚರಂಡಿಯಲ್ಲಿ ಸಂಗ್ರಹವಾಗುವ ಮಾನವ ಮಲವನ್ನು ಸ್ವಚ್ಛಗೊಳಿಸುವ ಹಾಗೂ ಶೌಚಾಲಯ ಮಲ ಗುಂಡಿಗಳನ್ನು ದೈಹಿಕವಾಗಿ ಸ್ವಚ್ಛಗೊಳಿಸುವ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಾರ್ಯದಲ್ಲಿ ತೊಡಗಿರುವವರು ಮೇಲ್ಕಂಡ ಸ್ಥಳಗಳಲ್ಲಿ ಆಯೋಜಿಸಿರುವ ಸಮೀಕ್ಷೆ ಮತ್ತು ಗುರುತಿಸುವಿಕೆಯ ಶಿಬಿರದಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸಿ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಕುಟುಂಬದ ಸದಸ್ಯರುಗಳನ್ನು ಒಳಗೊಂಡ ಭಾವಚಿತ್ರ, ಬ್ಯಾಂಕ್ ಖಾತೆಯ ಪ್ರತಿ, ಆಧಾರ್ ಪ್ರತಿ ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಾರ್ಯನಿರ್ವಹಿಸುತ್ತಿರುವ ಅನೈರ್ಮಲ್ಯ ಶೌಚಾಲಯ ಸ್ಥಳದ ವಿವರಗಳೊಂದಿಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬೈಂದೂರು ಪಟ್ಟಣ ಪಂಚಾಯತ್ ಕಚೇರಿ ಅಥವಾ ಮೊ.ನಂ:7019166640 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.