ಉಡುಪಿ, ಮೇ 23: ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನೆಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಗುಂಡ್ಮಿ ಗ್ರಾಮದ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಮೇ 31 ರಂದು ಬೆಳಗ್ಗೆ 11 ಗಂಟೆಗೆ ಗುಂಡ್ಮಿ ಅಂಗನವಾಡಿ ಕೇಂದ್ರದ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಬ್ರಹ್ಮಾವರ ದೂ.ಸಂಖ್ಯೆ: 0820-2562244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
