ಉಡುಪಿ, ಜೂ 12: 2023ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಮೊದಲ ಮೂರು ಸ್ಥಾನಗಳಿಸಿದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಾದ ಕುಂದಾಪುರ ತಾಲೂಕಿನ ಉಪ್ಪುಂದ ಸರ್ಕಾರಿ ಜೂನಿಯರ್ ಕಾಲೇಜಿನ ಅಮೂಲ್ಯ (623 ಅಂಕ), ಬೈಂದೂರಿನ ಚಿತ್ತೂರು ಸರ್ಕಾರಿ ಪ್ರೌಢ ಶಾಲೆಯ ಚೈತನ್ಯ (623 ಅಂಕ) ಹಾಗೂ ಕಾರ್ಕಳದ ಕುಕ್ಕುಜೆ ಸರ್ಕಾರಿ ಜೂನಿಯರ್ ಕಾಲೇಜಿನ ಧನ್ಯಾ ನಾಯ್ಕ್ (622 ಅಂಕ) ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಲ್ಯಾಪ್‍ಟಾಪ್ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಉಪಸ್ಥಿತರಿದ್ದರು.